ಶ್ರೀನಗರ, ಮೇ 30 (DaijiworldNews/PY) : ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಉಗ್ರರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇನ್ನುಳಿದವರಿಗೆ ಹುಡುಕಾಟ ಕಾರ್ಯಾಚರಣೆ ಮುಂದುವರೆದಿದೆ.
ಉಗ್ರರ ವಿರುದ್ಧದ ಜಂಟಿ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ರೈಫಲ್ಸ್, ರಾಜ್ಯ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಗಳು (ಸಿಆರ್ಪಿಎಫ್) ಪಾಲ್ಗೊಂಡಿವೆ. ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಜಿಲ್ಲೆಯಲ್ಲ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.