ಬೆಂಗಳೂರು, ಮೇ 30 (Daijiworld News/MSP): ರಾಜ್ಯದಲ್ಲಿ ಮೇ.30ರ ಶನಿವಾರದಿಂದ ಕೋವಿಡ್-19 ಅಪ್ಡೇಟ್ ಬಗ್ಗೆ ಬೆಳಗಿನ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ.
ಈ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಿಂದಿನಿಂದಲೂ ಕೋವಿಡ್-19 ಅಪ್ಡೇಟ್ ಬಗ್ಗೆ ದಿನಕ್ಕೆ ಎರಡು ಬಾರಿ ಹೆಲ್ತ್ ಬುಲೆಟಿನ್ ಮಾಡಲಾಗುತ್ತಿತ್ತು. ಸದ್ಯ ಕೊರೊನಾ ಟಾಸ್ಕ್ ಫೋರ್ಸ್ ಸಲಹೆಯಂತೆ ರಾಜ್ಯ ಸರ್ಕಾರ ಇನ್ಮುಂದೆ, ಒಟ್ಟಾರೆಯಾಗಿ ಸಂಜೆ ಮಾತ್ರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುತ್ತದೆ ಎಂದಿದ್ದಾರೆ.
ಈ ಹಿಂದೆ ಮಧ್ಯಾಹ್ನ 12 ಗಂಟೆ ವೇಳೆಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುತ್ತಿತ್ತು. ಆ ಬಳಿಕ ಮಧ್ಯಾಹ್ನ 1 ಗಂಟೆ ವೇಳೆಗೆ ಮಾಹಿತಿ ನೀಡಲಾಗುತ್ತಿತ್ತು. ಆದರೆ ಮಧ್ಯಾಹ್ನದ ವೇಳೆ ಎಲ್ಲಾ ಮಾಹಿತಿಯನ್ನೂ ಹುಡುಕುವಲ್ಲಿ ಇಲಾಖೆ ಕೆಲ ಸಂಕಷ್ಟಗಳು ಎದುರಾಗುತ್ತಿವೆ ಎಂದಿರುವ ಸರ್ಕಾರ ಅಂತಿಮವಾಗಿ ಬೆಳಗಿನ ಹೆಲ್ತ್ ಬುಲೆಟಿನ್ ನೀಡುವುದನ್ನೇ ನಿಲ್ಲಿಸಿದ್ದು, ಒಟ್ಟಾರೆ ಸಂಜೆ ವೇಳೆಯೇ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವುದಾಗಿ ತಿಳಿಸಿದೆ.