ನವದೆಹಲಿ, ಮೇ 30 (Daijiworld News/MB) : ದೇಶದಲ್ಲಿ ಕಳೆದ ಒಂದು ದಿನದಲ್ಲೇ 11,264 ಜನ ಸೋಂಕಿತರು ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ದೇಶದಲ್ಲಿ ಒಂದೇ ದಿನದಲ್ಲಿ 7,964 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದು 265 ಜನ ಕೊರೊನಾದಿಂದಾಗಿ ಮೃತಪಟ್ಟ ಬೆನ್ನಲ್ಲೇ ಒಂದೇ ದಿನದಲ್ಲಿ 11,264 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿರುವುದು ಧನಾತ್ಮಕ ಬೆಳವಣಿಗೆ ಎಂದು ಹೇಳಿದ್ದಾರೆ.
ಇನ್ನು ದೇಶದಲ್ಲಿ ಈವರೆಗೆ ಒಟ್ಟಾರೆಯಾಗಿ 1,73,763 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಪೈಕಿ 4971 ಜನರು ಮೃತಪಟ್ಟರೆ 82,370 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 86,422 ಪ್ರಕರಣಗಳು ಸಕ್ರಿಯವಾಗಿದೆ.