ನವದೆಹಲಿ, ಮೇ 30 (DaijiworldNews/SM): ದೇಶಾದ್ಯಂತ ಲಾಕ್ಡೌನ್ ಮತ್ತೆ ವಿಸ್ತರಣೆಯಾಗಿದೆ. ಜೂ. 30ರ ತನಕ ವಿಸ್ತರಿಸಿ ಕೇಂದ್ರ ಸರಕಾರ ಆದೇಶ ನೀಡಿದೆ.
ಈಗಾಗಲೇ ನಾಲ್ಕನೇ ಹಂತದ ಲಾಕ್ ಡೌನ್ ಅವದಿ ಮೇ 31ರಂದು ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಿಸಿ ಕೇಂದ್ರ ಗೃಹ ಇಲಾಖೆ ಆದೇಶ ನೀಡಿದೆ.
ಇನ್ನು ರಾತ್ರಿ 9ರಿಂದ ಬೆಳಗ್ಗೆ 5ರ ತನಕ ಕರ್ಫ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕ ಸಭೆ ಸಮಾರಂಭಗಳಿಗೆ ನಿರ್ಬಂಧವಿರಲಿದೆ. ಇನ್ನು ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ರೈಲು ಓಡಾಟದ ಬಗ್ಗೆ ನಿರ್ಧಾರ ಕೈಗೊಳ್ಳುವ ಬಗ್ಗೆ ಗೃಹ ಇಲಾಖೆ ನಿರ್ಧಾರಿಸಿದೆ.
ಇನ್ನು ಈ ನಡುವೆ ಶಾಪಿಂಗ್ ಮಾಲ್, ಹೋಟೆಲ್ಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಕಂಟೈನ್ಮೆಂಟ್ ಝೋನ್ ಹೊರತುಪಡಿಸಿದಂತೆ ಉಳಿದೆಲ್ಲ ಪ್ರದೇಶಗಳಲ್ಲಿ ನಿಯಮಗಳು ಸಡಿಲಿಕೆ ಇರಲಿದೆ ಎಂದು ಗೃಹ ಇಲಾಖೆ ತಿಳಿಸಿದೆ. ಅಂತರರಾಷ್ಟ್ರೀಯ ವಿಮಾನ ಹಾರಾಟ, ಮೆಟ್ರೋ ರೈಲಿನ ಕಾರ್ಯಾಚರಣೆ, ಸಿನೆಮಾ ಹಾಲ್ಗಳು, ಜಿಮ್, ಈಜುಕೊಳಗಳು, ಇತರೆ ಮನರಂಜನಾ ಸ್ಥಳಗಳನ್ನು ತೆರೆಯುವ ದಿನಾಂಕದ ಬಗ್ಗೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುತ್ತದೆ ಎಂದು ತಿಳಿಸಿದೆ.