ನವದೆಹಲಿ, ಮೇ 30 (DaijiworldNews/SM): ದೇಶಾದ್ಯಂತ ಐದನೇ ಹಂತದ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಕೇಂದ್ರ ಗೃಹ ಇಲಾಖೆ ನಿರ್ದೇಶನ ನೀಡಿದ್ದು, ಜೂನ್ 30ರ ತನಕ ಲಾಕ್ ಡೌನ್ ವಿಸ್ತರಿಸಲಾಗಿದೆ. ಈ ನಡುವೆ, ಧಾರ್ಮಿಕ ಕೇಂದ್ರಗಳು ಸೇರಿದಂತೆ ಮಾಲ್, ಹೋಟೆಲ್ ಗಳು ಪುನರಾರಂಭಿಸಲು ಸೂಚನೆ ನೀಡಿದೆ. ಜೂನ್ ೮ರಿಂದ ಇವುಗಳು ಕಾರ್ಯಾರಂಭಗೊಳ್ಳಲಿವೆ.
ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಮೊದಲನೇ ಹಂತದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಜೂನ್ ೮ರಿಂದ ಎಲ್ಲಾ ಧಾರ್ಮಿಕ ಕೇಂದ್ರಗಳು ಭಕ್ತರಿಗೆ ತೆರೆದುಕೊಳ್ಳಲಿವೆ. ಇನ್ನು ದೇವಸ್ಥಾನಗಳು, ಮಾಲ್, ಹೋಟೆಲ್ ಆರಂಭಿಸಲು ಜೂನ್ 8ರಿಂದ ಅನುಮತಿ ನೀಡಬಹುದೆಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ,
ಶಾಲೆ ಕಾಲೇಜುಗಳು ಓಪನ್ ಇಲ್ಲ:
ಇನ್ನು ಮೊದಲನೇ ಹಂತದಲ್ಲಿ ಶಾಲಾ ಕಾಲೇಜುಗಳನ್ನು ತೆರೆಯಲು ಅನುಮತು ನೀಡಿಲ್ಲ. ಎರಡನೇ ಹಂತದಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಚರ್ಚಿಸಿದ ನಂತರ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ತರಬೇತಿ ಸಂಸ್ಥೆಗಳನ್ನು ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಕೇಂದ್ರ ತಿಳಿಸಿದೆ. ಆದರೆ, ಸದ್ಯಕ್ಕೆ ಯಾವುದೇ ಪ್ರಸ್ತಾಪಗಳು ಹೊರ ಬಿದ್ದಿಲ್ಲ.