ಬೆಂಗಳೂರು, ಮೇ 31 (DaijiworldNews/PY) : 2020-21ನೇ ಸಾಲಿನ ಕರ್ನಾಟಕ ಪೊಲೀಸ್ ಇಲಾಖೆಯ ನೇಮಕಾತಿಗೆ ಸಂಬಂಧಪಟ್ಟಂತೆ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ (ಸಿವಿಲ್)- 431 ಹಾಗೂ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) (ಕಲ್ಯಾಣ ಕರ್ನಾಟಕ) -125 ಹುದ್ದೆಗಳಿಗೆ ಅರ್ಜಿ ಆಹ್ವಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಈ ಹಿಂದೆ ಪತ್ರಿಕಾ ಪ್ರಕಟಣೆಯಲ್ಲಿ ಜೂನ್ 1ರಿಂದ ಜೂನ್ 30ರವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ವಿಚಾರದ ಬಗ್ಗೆ ನೀಡಲಾಗಿತ್ತು. ಆದರೆ, ಸದ್ಯ ಅರ್ಜಿ ಆಹ್ವಾನವನ್ನು ಆಡಳಿತಾತ್ಮಕ ಕಾರಣಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮುಂದಿನ ಆಹ್ವಾನ ದಿನಾಂಕವನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗುವುದು ಎಂದು ಪ್ರಕಟಣೆ ವಿವರಿಸಿದೆ.