ನವದದೆಹಲಿ, ಮೇ 31 (Daijiworld News/MB) : ಕೊರೊನಾ ಲಾಕ್ಡೌನ್ ಕಾರಣದಿಂದ ಆರ್ಥಿಕವಾಗಿ ಸಂಕಷ್ಟ ಉಂಟಾಗಿದ್ದು ಈ ಕಾರಣದಿಂದಾಗಿ ಕೇಂದ್ರ 5,000 ಕೋಟಿ ನೆರವು ನೀಡಬೇಕು ಎಂದು ದೆಹಲಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಈ ಕುರಿತಾಗಿ ಮನವಿ ಮಾಡಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಕೊರೊನಾ ಲಾಕ್ಡೌನ್ ಹಿನ್ನಲೆ ರಾಜ್ಯದ ಆದಾಯ ಕಡಿಮೆ ಆಗಿರುವುದರಿಂದ ನೆರವು ಬೇಡುತ್ತಿದ್ದೇವೆ ಎಂದು ಹೇಳಿದ್ದಾರೆಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ದೆಹಲಿಯಲ್ಲಿ ಈವರೆಗೆ 18,549 ಮಂದಿಗೆ ಕೊರೊನಾ ಸೋಂಕು ತಗುಲಿದ್ದು 416 ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. 8075 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 10,058 ಸಕ್ರಿಯ ಪ್ರಕರಣವಾಗಿದೆ.