ರಜೌರಿ, ಜೂ 01 (DaijiworldNews/PY) : ನೌಶೇರಾ ಸೆಕ್ಟರ್ನ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಪ್ರತಿ-ಒಳನುಸುಳುವಿಕೆ ತಡೆ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದಿಂದ ತರಬೇತಿ ಪಡೆದ ಭಾರಿ ಶಸ್ತ್ರಸಜ್ಜಿತ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಭಾತರೀಯ ಸೇನೆ ತಿಳಿಸಿದೆ.
ಭಾರತೀಯ ಸೇನೆಯ ಎಚ್ಚರಿಕೆ ಪಡೆಗಳು ಮೇ 28ರಿಂದಲೂ ನಡೆಯುತ್ತಿರುವ ಪ್ರತಿ-ಒಳನುಸುಳುವಿಕೆ ಕಾರ್ಯಾಚರಣೆಯಲ್ಲಿ, ನೌಶೇರಾ ಸೆಕ್ಟರ್ನಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಬಿಡ್ ಅನ್ನು ತೆಗೆದುಹಾಕಿದೆ. ಪಾಕಿಸ್ತಾನದಿಂದ ತರಬೇತಿ ಪಡೆದಿರುವ ಭಾರಿ ಶಸ್ತ್ರಸಜ್ಜಿತ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಸದ್ಯ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆ ಹೇಳಿದೆ.
ಪುಲ್ವಾಮಾ ಮಾದರಿಯಲ್ಲಿ ಮತ್ತೊಂದು ದಾಳಿ ನಡೆಸಲು ಯೋಜನೆ ರೂಪಿಸಿದ್ದ ಉಗ್ರರ ಯತ್ನವನ್ನು ಸಮಯೋಚಿತ ಮಾಹಿತಿ ಮೇರೆಗೆ ತಪ್ಪಿಸಲಾಗಿತ್ತು. ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಕಾರು ಬಾಂಬ್ ಮೂಲಕ ದೊಡ್ಡ ಪ್ರಮಾಣದಲ್ಲಿ ಆತ್ಮಹತ್ಯೆ ದಾಳಿ ಮಾಡಲು ಈ ಸಂಚನ್ನು ಹಿಜ್ಬುಲ್ ಮುಜಾಹೀದ್ದೀನ್ ಹಾಗೂ ಜೈಷ್-ಇ-ಮೊಹಮ್ಮದ್ ಉಗ್ರಗಾಮಿ ಸಂಘಟನೆಗಳು ರೂಪಿಸಿದ್ದವು.