ಬೆಂಗಳೂರು, ಜೂ. 02 (Daijiworld News/MB) : ಮೇ 7 ರಂದು ನಡೆಯಲಿದ್ದ ಪದಗ್ರಹಣ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಪದಗ್ರಹಣ ಕಾರ್ಯಕ್ರಮ ಮುಂದೂಡಲಾಗಿದೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಮತ್ತು ಪೊಲೀಸ್ ಕಮಿಷನರ್ ಬಳಿ ಮೇ 7ರಂದು ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದು ಆದರೆ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಇದೇ 8ರವರೆಗೆ ಯಾವುದೇ ರಾಜಕೀಯ ಸಭೆಗಳನ್ನು ನಡೆಸಲು ಅವಕಾಶ ಇಲ್ಲ. ಇದರ ಹಿಂದೆ ರಾಜಕೀಯ ಹುನ್ನಾರವಿದೆ ಎಂದು ಆರೋಪ ಮಾಡಿದ್ದಾರೆ.
ಸರ್ಕಾರ ಅನುಮತಿ ನೀಡಿದ ಬಳಿಕ ಈ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.
ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಸಾಂಕೇತಿಕವಾಗಿ ಕಾರ್ಯಕ್ರಮ ಮಾಡುವುದು ಒಂದು ಪದ್ಧತಿ. ನಮ್ಮ ಎಲ್ಲ ನಾಯಕರ ಜತೆ ಸೇರಿ ಸರಳ ಹಾಗೂ ವಿನೂತನ ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದೇವೆ. ಈ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ 150 ಮಂದಿ ಸೇರಿ ಮಾಡಲು ತೀರ್ಮಾನಿಸಿದ್ದು ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ವಾರ್ಡ್ಗಳು ಸೇರಿ ಸುಮಾರು 7,800 ಕಡೆಗಳಲ್ಲಿ ಒಂದೇ ಸಮಯದಲ್ಲಿ ವಂದೇ ಮಾತರಂ ಗೀತೆ ಹಾಡಿ ಕಾರ್ಯಕ್ರಮ ಆರಂಭ ಮಾಡಿ ಸಂವಿಧಾನದ ಪೀಠಿಕೆ ವಾಚನದೊಂದಿಗೆ ಪ್ರತಿಜ್ಞೆ ತೆಗೆದುಕೊಳ್ಳಲಾಗುವುದು. ಈ ಕಾರ್ಯಕ್ರಮವನ್ನು ಝೋಮ್ ಆಪ್ ಮೂಲಕವೂ ವೀಕ್ಷನೆ ಮಾಡಬಹುದು. ಹಾಗೆಯೇ ಕಾಂಗ್ರೆಸ್ ಕಾರ್ಯಕರ್ತರು, ಹಿತೈಷಿಗಳು ಮನೆಯಲ್ಲೇ 7676366666 ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು.