ನವದೆಹಲಿ, ಜೂ. 03 (Daijiworld News/MB) : ಅಮೆರಿಕದಲ್ಲಿ ನಡೆಯಲಿರುವ ಜಿ7 ರಾಷ್ಟ್ರಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಹ್ವಾನಿಸಿದ್ದಾರೆ.
ಜೂನ್ನಲ್ಲಿ ಶ್ವೇತಭವನದಲ್ಲಿ ನಡೆಯಲಿದ್ದ ಜಿ7 ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೆಪ್ಟೆಂಬರ್ವರೆಗೆ ಮುಂದೂಡಿದ್ದು ಇದು ಹಳೆಯ ಗುಂಪು ಭಾರತವನ್ನೂ ಸೇರಿಸಬೇಕು ಎಂದು ಹೇಳಿದ್ದರು.
ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು ಜಿ7 ರಾಷ್ಟ್ರಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿಗೆ ಆಹ್ವಾನ ನೀಡಿದ್ದಾರೆ.
ಹಾಗೆಯೇ ಪ್ರಧಾನಿ ಮೋದಿಯವರು ಹಾಗೂ ಟ್ರಂಪ್ ಅವರು ಸುಮಾರು 40 ನಿಮಿಷಗಳ ಕಾಲ ದೂರವಾಣಿ ಕರೆಯಲ್ಲಿ ಮಾತನಾಡಿದ್ದು ಈ ಸಂದರ್ಭದಲ್ಲಿ ಭಾರತಕ್ಕೆ ಜಿ೭ ರಾಷ್ಟ್ರಗಳ ಸದಸ್ಯತ್ವದ ಕುರಿತಾಗಿ, ಚೀನಾ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತಾಗಿ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.