ಪುಲ್ವಾಮಾ, ಜೂ. 03 (Daijiworld News/MB) : ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬುಧವಾರ ಬೆಳಿಗ್ಗೆ ಇಲ್ಲಿನ ಕಂಗಾನ್ ಪ್ರದೇಶದಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದ್ದು ಮೃತರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ ಇಬ್ಬರು ಜೈಶ್-ಎ-ಮೊಹಮ್ಮದ್ (ಜೆಎಂ) ಉಗ್ರರನ್ನು ಭದ್ರತಾ ಪಡೆ ಎನ್ಕೌಂಟರ್ ಮಾಡಿದ್ದು ಅವರಿಂದ ಎರಡು ಪಿಸ್ತೂಲ್ಗಳು ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿತ್ತು.
ಪ್ರಸ್ತುತ ಕಂಗಾನ್ ಪ್ರದೇಶದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.