ಬೆಂಗಳೂರು, ಜೂ 03 (DaijiworldNews/PY) : ರಾಜ್ಯಸಭೆ ಚುನಾವಣೆಗೆ ಇನ್ನು ಕೇವಲ ಎರಡು ವಾರಗಳು ಮಾತ್ರ ಬಾಕಿ ಇದ್ದು, ಈ ಹಿನ್ನೆಲೆ ಬಿಜೆಪಿಯಿಂದ ತೇಜಸ್ವಿನಿ ಅನಂತ್ ಕುಮಾರ್, ಕಾಂಗ್ರೆಸ್ನಿಂದ ಖರ್ಗೆ ಹಾಗೂ ಜೆಡಿಎಸ್ನಿಂದ ದೇವೆಗೌಡರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ವಿಧಾನಸಭೆಯಲ್ಲಿರುವ ಬಲಾಬಲದ ಮೇಲೆ ಬಿಜೆಪಿ 2 ಸ್ಥಾನ ಗೆಲ್ಲಲಿದೆ. 1 ಸ್ಥಾನ ಕಾಂಗ್ರೆಸ್ ಗಳಿಸಲಿದೆ. ಇನ್ನು ಜೆಡಿಎಸ್ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದೇ ಆದರೆ ಕಾಂಗ್ರೆಸ್ ನಾಲ್ಕನೇ ಸೀಟ್ ಗಳಿಸಿಕೊಳ್ಳುವ ಸಾಧ್ಯತೆ ಇದೆ.
ರಾಜ್ಯದ 4 ರಾಜ್ಯಸಭೆ ಸ್ಥಾನಗಳಿಗೆ ಜೂನ್ 19 ರಂದು ಚುನಾವಣೆ ನಡೆಯಲಿದ್ದು, ಜೂನ್ 9 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ತನ್ನ ಅಭ್ಯರ್ಥಿ ಯಾರು ಎಂದು ಬಿಜೆಪಿ ಇನ್ನೂ ತೀರ್ಮಾನ ಮಾಡಿಲ್ಲ. ಆದರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರ ಹೆಸರು ಕೇಳಿ ಬರುತ್ತಿದೆ. ತೇಜಸ್ವಿ ಅವರು ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಸದಾ ಕ್ರಿಯಶೀಲರಾಗಿರುವ ಅವರನ್ನು ಇನ್ನಷ್ಟು ಸಕ್ರಿಯಗೊಳಿಸಲು ಅವರನ್ನು ನೇಮಕ ಮಾಡಬೇಕೆನ್ನುವುದು ಕೆಲವರ ಅಭಿಪ್ರಾಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ದೇವೇಗೌಡರ ಹೆಸರು ಕೇಳಿಬರುತ್ತಿದೆ. ಜೆಡಿಎಸ್ನಲ್ಲಿ 34 ಶಾಸಕರಿದ್ದು, ಅವರಿಗೆ ಕಾಂಗ್ರೆಸ್ ಬೆಂಬಲ ಬೇಕಿದೆ. ದೇವೇಗೌಡರಿಗೆ ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ಮತ್ತೊಮ್ಮೆ ಸೋಲುಂಟಾಗುವ ಸಾಧ್ಯತೆಯಿದೆ ಎಂದು ಜೆಡಿಎಸ್ ನಾಯಕರು ಅನುಮಾನ ವ್ಯಕ್ತಪಡಿಸಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಹೆಸರು ಕೂಡ ಕೇಳಿ ಬರುತ್ತಿದ್ದು, ಈ ವಿಚಾರವಾಗಿ ಪಕ್ಷವು ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇನ್ನು ಆಡಳಿತರೂಢ ಬಿಜೆಪಿ ಮೇಲ್ಮನೆಯಲ್ಲಿ ತನ್ನ ಸದಸ್ಯರ ಸ್ಥಾನವನ್ನ ಹೆಚ್ಚು ಮಾಡಿಕೊಳ್ಳುವ ಸಾಧ್ಯತೆ ಇದೆ. ವಿಧಾನಸಭೆಯಲ್ಲಿ 34 ಸದಸ್ಯರನ್ನು ಹೊಂದಿರುವ ಜೆಡಿಎಸ್, ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್ ಅನ್ನು ಬೆಂಬಲಿಸಬಹುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಆರ್ಎಸ್ಎಸ್ ಮೂಲದ ಪ್ರಭಾಕರ್ ಕೋರೆ ಅವರನ್ನು ಕಣಕ್ಕಡ ಇಳಿಸಬೇಕೆಂಬ ಒತ್ತಡ ಕೇಳಿ ಬರುತ್ತಿದ್ದರೂ, ಕರ್ನಾಟಕದಿಂದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಳೀಧರ್ ರಾವ್ ಅವರು ಆಯ್ಕೆ ಬಯಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಚರ್ಚೆ ನಡೆಸಲು ಇನ್ನೂ ಅಭೆ ಸೇರಬೇಕಿದೆ. ಸಿಎಂ ಬಿಎಸ್ವೈ ಅವರೂ ಹಾಗೂ ರಾಜ್ಯ ಬಿಜೆಪಿ ಘಟಕದೊಂದಿಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ.