ಬೆಂಗಳೂರು, ಜೂ 04 (DaijiworldNews/PY) : ಸರ್ಕಾರ ಉಪನ್ಯಾಸಕರ ಬೇಡಿಕೆ ಈಡೇರಿಸದ ಕಾರಣ ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಈ ಬಗ್ಗೆ ಮಾತನಾಡಿದ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ, ಸರ್ಕಾರವು ಬೆಂಗಳೂರಿಗೆ ಬಂದು ಮೌಲ್ಯಮಾಪನ ಮಾಡುವ ಉಪನ್ಯಾಸಕರಿಗೆ ಸಿಯಾದ ವ್ಯವಸ್ಥೆ ಮಾಡಿಲ್ಲ. ಹಾಗಾಗಿ ಸರ್ಕಾರದ ಈ ನಡೆಗೆ ಉಪನ್ಯಾಸಕರು ಆಕ್ರೋಶಗೊಂಡಿದ್ದಾರೆ. ಮೌಲ್ಯಮಾಪನಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಿ. ಇಲ್ಲದಿದ್ದರೆ ಕೊರೊನಾ ನಿಯಂತ್ರಣ ಆಗುವವರೆಗೂ ಮೌಲ್ಯಮಾಪನ ಸ್ಥಗಿತ ಮಾಡಿ ಎಂದು ತಿಳಿಸಿದ್ದಾರೆ.
ಕೊರೊನಾ ಹಿನ್ನಲೆ ಆಯಾ ಜಿಲ್ಲೆಗಳಿಗೆ ಮೌಲ್ಯಮಾಪನ ಕೇಂದ್ರಗಳನ್ನು ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಆದರೆ, ಉಪನ್ಯಾಸಕರ ಬೇಡಿಕೆಯನ್ನು ಸರ್ಕಾರ ಈಡೇರಿಸದ ಕಾರಣ ನಾಳೆಯಿಂದ ಆರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘ ತೀರ್ಮಾನ ಮಾಡಿದೆ.