ಬೆಂಗಳೂರು, ಜೂ 04 (Daijiworld News/MSP): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ವಿವಾಹ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮಾರ್ಥ್ಯ ಜೊತೆ ನಡೆಯಲಿದೆ ಎಂದು ತಿಳಿದುಬಂದಿದೆ.
ಸಿದ್ದಾರ್ಥ್ ಹೆಗ್ಡೆ ಪುತ್ರ ಅಮಾರ್ಥ್ಯ ಜೊತೆ ಐಶ್ವರ್ಯಾ ಮದುವೆ ನೆರೆವೇರಿಸಲು ಎರಡು ಕುಟುಂಬದ ಸದಸ್ಯರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಇನ್ನು 6 ತಿಂಗಳಲ್ಲಿ ಮದುವೆ ಮಾಡಲು ನಿರ್ಧರಿಸಲಾಗಿದ್ದು, ಲಾಕ್ ಡೌನ್ ಮುಗಿದ ತಕ್ಷಣ ನಿಶ್ಚಿತಾರ್ಥ ನಡೆಯಲಿದೆ.
ಡಿ.ಕೆ ಶಿವಕುಮಾರ್ ಮತ್ತು ಸಿದ್ಧಾರ್ಥ್ ಆತ್ಮೀಯ ಸ್ನೇಹಿತರು ಮಾತ್ರವಲ್ಲ, ಉದ್ಯಮದಲ್ಲಿ ಪಾಲುದಾರರು ಕೂಡ. ಸಿದ್ಧಾರ್ಥ್ ಮಾವ ಅಂದರೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಶಿವಕುಮಾರ್ಗೆ ಹಿಂದೆ ರಾಜಕೀಯ ಗುರುವಾಗಿದ್ದವರು. ಆದ್ರೆ ಈ ಬಗ್ಗೆ ಡಿ.ಕೆ.ಶಿವಕುಮಾರ್ ಆಗಲೀ ಎಸ್.ಎಂ.ಕೃಷ್ಣಾ ಅವರ ಕುಟುಂಬಸ್ಥರಾಗಲಿ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.