ನವದೆಹಲಿ, ಜೂ. 04 (Daijiworld News/MB) : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ನಡುವೆ ಭಾರತದ ಒಟ್ಟು ಸೋಂಕಿತರಲ್ಲಿ ಸುಮಾರು 1 ಲಕ್ಷ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದು ಆಶಾದಾಯಕ ಬೆಳವಣಿಗೆಯಾಗಿದೆ.
ದೇಶದಲ್ಲಿ ಒಂದು ದಿನದಲ್ಲೇ 9,304 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 216919 ಕ್ಕೆ ಏರಿಕೆಯಾಗಿದೆ. ಒಟ್ಟು 6075 ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಪ್ರಸ್ತುತ 106737 ಪ್ರಕರಣಗಳು ಸಕ್ರಿಯವಾಗಿದ್ದು 104107 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ದೇಶದಲ್ಲಿ ಶೇ 48.31ಕ್ಕೆ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ 74860 ಜನರಿಗೆ ಸೋಂಕು ತಗುಲಿದ್ದು 2587 ಮಂದಿ ಸಾವನ್ನಪ್ಪಿದರೆ 32329 ಮಂದಿಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರ್ನಾಟಕದಲ್ಲಿ 4063 ಕೊರೊನಾ ಪ್ರಕರಣಗಳು ದಾಖಲಾಗಿದ್ದು 1514 ಮಂದಿ ಗುಣಮುಖರಾಗಿದ್ದು 53 ಮಂದಿ ಮೃತಪಟ್ಟಿದ್ದಾರೆ.