ಮಡಿಕೇರಿ, ಜೂ 04 (DaijiworldNews/PY) : ಸಿಎಂ ಬಿಎಸ್ವೈ ಅವರು ರಾಜಾಹುಲಿ ಇದ್ದಂತೆ. ಮುಂದಿನ ಮೂರು ವರ್ಷ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸರ್ಕಾರ ಸುಭದ್ರವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಕೊಡಗಿನ ಜಂಬೂರಿನಲ್ಲಿ 2018ರ ಪ್ರವಾಹ ಸಂತ್ರಸ್ತರಿಗೆ ಮನೆ ಹಸ್ತಾಂತರ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಮುಂದಿನ ಮೂರು ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ರಾಜ್ಯದಲ್ಲಿ ಪ್ರವಾಹ ಉಂಟಾದ ಸಂದರ್ಭ ಹಾಗೂ ಕೊರೊನಾ ವೈರಸ್ನ ಸಂದಿಗ್ದ ಪರಿಸ್ಥಿತಿಯಲ್ಲಿ ಎಲ್ಲವ್ನನೂ ಸಮರ್ಥವಾಗಿ ನಿಭಾಯಿಸಿದ್ದಾರೆ. ಹಾಗಾಗಿ ಮುಂದೆಯೂ ಬಿಎಸ್ವೈ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಸಂದರ್ಭ ಇಬ್ಬರು ಸಿಎಂಗಳಿದ್ದರು ಎನಿಸುತ್ತದೆ. ಮಾಜಿ ಸಿಎಂ ಎಚ್.ಡಿ.ಕೆ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ಆಡಳಿತಗಳು ಇದ್ದವು ಎಂದು ಅನಿಸುತ್ತದೆ. ಆದರೆ, ಬಿಎಸ್ವೈ ಅವರು ಸಮರ್ಥರಾಗಿದ್ದಾರೆ. ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾದವರು. ಯಾರ ಸಲಹೆಯೂ ಅವರಿಗೆ ಬೇಕಾಗಿಲ್ಲ ಎಂದರು.