ಬೆಂಗಳೂರು, ಜೂ 04 (DaijiworldNews/SM): ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಗುರುವಾರ ಒಂದೇ ದಿನ ಕೊರೊನಾ ಸೋಂಕು ನಾಲ್ವರು ಮೃತಪಟ್ಟಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 57ಕ್ಕೆ ತಲುಪಿದೆ.
ಗುರುವಾರದಂದು ಬೆಂಗಳೂರಿನಲ್ಲಿ ಇಬ್ಬರು ಹಾಗೂ ದಾವಣಗೆರೆ ಮತ್ತು ಗದಗದಲ್ಲಿ ತಲಾ ಒಬ್ಬರು ಸೋಂಕಿನಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಗುರುವಾರದಂದು ರಾಜ್ಯದಲ್ಲಿ 257 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4320ಕ್ಕೆರಿಕೆಯಾಗಿದೆ.
ರಾಜ್ಯದಲ್ಲಿ ಸದ್ಯ 2651 ಮಂದಿ ಸೋಂಕಿತರಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.