ಬೆಂಗಳೂರು, ಜೂ 05 (DaijiworldNews/PY) : ಆರೋಗ್ಯ ಸೇತು ಮೊಬೈಲ್ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸಿರುವ ವಿಚಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.
ಡಿಜಿಟಲ್ ವಲಯದಲ್ಲಿ ನಾಗರಿಕ ಹಕ್ಕುಗಳ ರಕ್ಷಣೆಗೆ ಹೋರಾಟ ಮಾಡುತ್ತಿರುವ ಬೆಂಗಳೂರಿನ ಅನಿವರ್ ಎ.ಅರವಿಂದ್ ಸಲ್ಲಿಸಿರುವ ಪಿಐಎಲ್ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.
ಕೊರೊನಾ ಆರೋಗ್ಯ ಸೇತು ಮೊಬೈಲ್ ಆ್ಯಪ್ ಬಳಕೆಯನ್ನು ರೈಲು ಪ್ರಯಾಣಿಕರಿಗೆ ಕಡ್ಡಾಯ ಮಾಡಲಾಗಿತ್ತು. ಜೂನ್ 1ರಿಂದ ರೈಲಿನಲ್ಲಿ ಪ್ರಯಾಣ ಮಾಡುವವರು ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಕಡ್ಡಾಯವಾಗಿ ಮಾಡಿಕೊಳ್ಳಬೇಕೆಂದು ಆದೇಶ ಹೊರಡಿಸಿತ್ತು.