ಬೆಂಗಳೂರು,ಜೂ 06 (Daijiworld News/MSP): ಇದೇ 19ರಂದು ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಆಡಳಿತಾರೂಢ ಬಿಜೆಪಿಯಿಂದ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವ ಕುರಿತು ತೀವ್ರ ಕುತೂಹಲ ಮೂಡಿಸಿದೆ. ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಕೇಂದ್ರ ಸಮಿತಿಗೆ ಯಾರ ಹೆಸರನ್ನು ಶಿಫಾರಸು ಮಾಡಲಾಗುವುದು ಎನ್ನುವುದು ಕುತೂಹಲ ಮೂಡಿಸಿದೆ.
ಬಿಜೆಪಿಯಿಂದ ರಾಜ್ಯಸಭೆಗೆ ಇಬ್ಬರು ಆಯ್ಕೆಯಾಗುವ ಅವಕಾಶ ಇರುವುದರಿಂದ ಸಮಾಜ ಸೇವೆ ಕೋಟಾದಡಿ ಈ ಇಬ್ಬರಲ್ಲಿ ಒಬ್ಬರನ್ನು ರಾಜ್ಯಸಭೆಗೆ ಕಳುಹಿಸಲು ಪಕ್ಷದ ವಲಯದಲ್ಲಿ ಚಿಂತನೆ ನಡೆದಿದೆ.
ಈ ಪೈಕಿ ಪ್ರಭಾಕರ ಕೋರೆ, ರಮೇಶ್ ಕತ್ತಿ, ವಿಜಯ ಸಂಕೇಶ್ವರ್, ತೇಜಸ್ವಿನಿ ಅನಂತಕುಮಾರ್ ಸೇರಿದಂತೆ ಹಲವರ ಹೆಸರು ಮುಂಚೂಣಿಯಲ್ಲಿವೆ ಎನ್ನಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ಹಿರಿಯ ನಾಯಕರ ಕೋರ್ ಕಮಿಟಿ ಸಭೆ ನಡೆಯಲಿದ್ದು, ಎರಡು ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಿ ಕೇಂದ್ರ ಸಮಿತಿಗೆ ಶಿಫಾರಸು ಮಾಡಲಾಗುವುದು.
ಮಾಜಿ ಸಂಸದ ರಮೇಶ್ ಕತ್ತಿ, ಹಾಲಿ ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ, ಕೆ.ವಿ. ಕಾಮತ್, ವಿಜಯ ಸಂಕೇಶ್ವರ್ ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿವೆ.
ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಈಗಾಗಲೇ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ