ಬೆಂಗಳೂರು, ಜೂ. 07 (DaijiworldNews/MB) : ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಯವರು ಮಾತ್ರ. ಜೆಡಿಎಸ್ ಪಕ್ಷದ ಬೆಂಬಲದ ಕುರಿತಾಗಿ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ. ನಾವೇನು ಬಿಜೆಪಿಯನ್ನು ಬೆಂಬಲಿಸಲು ಸಾಧ್ಯವೇ? ಜಾತ್ಯಾತೀತ ನಿಲುವನ್ನೇ ಬೆಂಬಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಮಾದ್ಯಮಕ್ಕೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಯವರು ಮಾತ್ರ. ಜೆಡಿಎಸ್ ಪಕ್ಷದ ಬೆಂಬಲದ ಕುರಿತಾಗಿ ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ. ಮೊದಲು ಶಾಸಕರ ಸಭೆ ನಡೆಸಿ ನಾಮಪತ್ರ ಸಲ್ಲಿಸಲಾಗುತ್ತದೆ. ಆ ಸಂದರ್ಭ ಕೆಲವೇ ಶಾಸಕರು ಮಾತ್ರ ಇರುತ್ತಾರೆ. ಈಗಾಗಲೇ ಕಾರ್ಯಕರ್ತರು ಬರಬಾರದೆಂದು ಮನವಿ ಮಾಡಲಾಗಿದೆ. ಬಂದರೂ ವಿಧಾನಸೌದದಲ್ಲಿ ಅವರಿಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಹಾಗೆಯೇ ಚುನಾವಣಾ ಫಲಿತಾಂಶದ ಬಳಿಕ ಎಲ್ಲರೂ ಸೇರಿ ಸಂಭ್ರಮಾಚರಣೆ ಮಾಡಲಾಗುವುದು ಎಂದೂ ಕೂಡಾ ಈ ಸಂದರ್ಭದಲ್ಲೇ ಹೇಳಿದ್ದಾರೆ.
ಇನ್ನು ತಮ್ಮ ಪದಗ್ರಹಣ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, ಜೂನ್ 14 ರಂದು ಪದಗ್ರಹಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಳಿ ಅನುಮತಿ ಕೋರಿದ್ದು ಅನುಮತಿ ದೊರೆತಲ್ಲಿ ಸರಳವಾಗಿ ಕಾರ್ಯಕ್ರಮ ನೆರವೇರಿಸಲಾಗುತ್ತದೆ ಎಂದಿದ್ದಾರೆ.