ಶ್ರೀನಗರ, ಜೂ 07 (DaijiworldNews/PY) : ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾನುವಾರ ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ದಕ್ಷಿಣ ಕಾಶ್ಮೀರದ ಶೋಪಿಯಾನ್ನ ರೆಬನ್ ಪ್ರದೇಶದಲ್ಲಿ ಅಡಗಿರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಭಾನುವಾರ ಇಲ್ಲಿ ಶೋಧ ಕಾರ್ಯಚರಣೆ ಕೈಗೊಂಡಿದ್ದು, ಈ ಸಂದರ್ಭ ಉಗ್ರರು ಗುಂಡಿನ ಚಕಮಕಿ ನಡೆಸಿದ್ದರು. ಈ ದಾಳಿಗೆ ಪ್ರತಿಯಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಯಾವ ಗುಂಪಿನೊಂದಿಗೆ ಉಗ್ರರು ಸಂಬಂಧ ಹೊಂದಿದ್ದರು ಹಾಗೂ ಮೃತ ಉಗ್ರರ ಗುರುತು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದ್ದಾರೆ.