ಬೆಂಗಳೂರು, ಜೂ. 07 (DaijiworldNews/SM): ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಚಿರನಿದ್ರೆಗೆ ಜಾರಿದ್ದಾರೆ. ಚಿರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ನಡುವೆ ರಾಜ್ಯದಲ್ಲಿ ಕೋವಿಡ್-೧೯ ಸೋಂಕು ತೀವ್ರವಾಗಿರುವ ಸಂದರ್ಭದಲ್ಲಿ ಚಿರು ಅವರ ಕೊರೊನಾ ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿರಂಜೀವಿ ಅವರ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಇದೀಗ ಅವರ ಪರೀಕ್ಷಾ ವರದಿ ನೆಗೆಟಿವ್ ಬಂದಿರುವುದಾಗಿ ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಚಿರು, ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಈ ನಡುವೆ ರವಿವಾರದಂದು ಅವರಿಗೆ ಮೂರು ಸಲ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ರವಾನಿಸುವ ಸಂದರ್ಭದಲ್ಲಿ ಅವರು ಇಹಲೋಕ ಪಯಣ ಮುಗಿಸಿದ್ದಾರೆ.