ಬೆಂಗಳೂರು, ಜೂ. 07 (DaijiworldNews/SM): ನಟ ಜಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ರಾಜ್ಯವೇ ಕಂಬನಿ ಮಿಡಿದಿದೆ. ಈ ನಡುವೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಂಬನಿ ಮಿಡಿದಿದ್ದು, ಅವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಅವರ ನಿಧನದಿಂದಾಗಿ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿ ಟ್ವೀಟ್ ಮಾಡಿದ್ದಾರೆ.
ಈ ನಡುವೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿಯವರೂ ಕೂಡ ಚಿರು ಸಾವಿಗೆ ಕಂಬನಿ ಮಿಡಿದಿದ್ದಾರೆ. ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ನೋವುಂಟುಮಾಡಿದೆ. ಇನ್ನಷ್ಟು ಕಾಲ ನಟಿಸುತ್ತಾ, ಎಲ್ಲರನ್ನು ರಂಜಿಸುತ್ತಾ ನಮ್ಮ ನಡುವೆ ಈ ಹುಡುಗ ಇರಬೇಕಿತ್ತು. ಅವರ ದುಃಖತಪ್ತ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಚಿರಂಜೀವಿ ಸರ್ಜಾಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಿದ್ದಾರೆ.
ಇನ್ನು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಿರಂಜೀವಿ ಸರ್ಜಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸಚಿವ ಶ್ರೀರಾಮುಲು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ಚಿದು ಸಾವಿಗೆ ಸಂತಾಪ ಸೂಚಿಸಿದ್ದಾರೆ.