ಬೆಂಗಳೂರು, ಜೂ.08 (DaijiworldNews/MB) : ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಭಾನುವಾರ ಅವರು ಬಿಡುಗಡೆಯಾದ ಸಂದರ್ಭದಲ್ಲಿ ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿ ಮೆರವಣಿಗೆ ಮಾಡಿದ್ದು ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಮೆರವಣಿಗೆ ಮಾಡುತ್ತಿದ್ದ ವಿಷಯ ತಿಳಿದಂತೆ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭೇಟಿ ನೀಡಿ ಇಮ್ರಾನ್ ಪಾಷಾ ವಿರುದ್ಧ ಕ್ರಮಕೈಗೊಳಲು ಸೂಚಿಸಿದ್ದು, ಉನ್ನತ ಉನ್ನತ ಮಟ್ಟದ ಅಧಿಕಾರಿಗಳು ಪಾಷಾರನ್ನ ತನಿಖೆ ನಡೆಸಿ ಯಾವ ಕೇಸ್ ಹಾಕಬೇಕು ಎಂದು ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ಸಂದರ್ಭದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಗಿದ್ದು ಈ ಫೋಟೋಗಳನ್ನು ಇಮ್ರಾನ್ ಪಾಷಾ ಅವರೇ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದು ಇವರನ್ನು ಬಂಧನ ಮಾಡಿರುವ ಪೊಲೀಸರು ವಿಕೋಪ ನಿರ್ವಹಣಾ ಕಾಯ್ಜೆ 2005ರ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ.