ನವದೆಹಲಿ, ಜೂ.08 (DaijiworldNews/MB) : ಶಾಲೆಗಳು ಆರಂಭವಾಗಲಿದೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಕೇಂದ್ರ ಸರ್ಕಾರ ಆಗಸ್ಟ್ ಬಳಿವಕಷ್ಟೇ ಶಾಲೆ, ಕಾಲೇಜುಗಳು ಆರಂಭವಾಗಲಿದೆ ಎಂದು ತಿಳಿಸಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್, ಜುಲೈನಿಂದ ಶೇಕಡಾ 30% ಹಾಜರಾತಿಯೊಂದಿಗೆ ಶಾಲೆ, ಕಾಲೇಜುಗಳು ಬೆಳಗ್ಗೆ ಮತ್ತು ಸಂಜೆಯ ಕ್ಲಾಸ್ಗಳನ್ನು ಆರಂಭ ಮಾಡಲಿದೆ. ಹಸಿರು ವಲಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭವಾಗಲಿದೆ. ಇದಕ್ಕೆ ರಾಜ್ಯ ಸರ್ಕಾರವು ಅನುಮತಿ ನೀಡಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು ಆದರೆ ಕೇಂದ್ರ ಸರ್ಕಾರ ಶಾಲೆ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡುವುದಿಲ್ಲ. ದೇಶದಲ್ಲಿ ಸೋಂಕು ಹೆಚ್ಚಾಗುತ್ತಿದ್ದು ಈ ಕಾರಣದಿಂದ ಆಗಸ್ಟ್ ಬಳಿಕವೇ ಶಾಲಾ ಕಾಲೇಜು ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ಇನ್ನು ಕೆಲವು ರಾಜ್ಯಗಳಲ್ಲಿ ಸಿಬಿಎಸ್ಸಿ ಸೇರಿದಂತೆ ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಡಿಪ್ಲೋಮಾ, ಪದವಿ ಪರೀಕ್ಷೆಗಳು ಬಾಕಿ ಉಳಿದಿದೆ. ಈ ಪರೀಕ್ಷೆಗಳನ್ನು ಆಗಸ್ಟ್ ಬಳಿಕ ಮಾಡಿ ಫಲಿತಾಂಶ ನೀಡಲು ಯತ್ನಿಸಲಾಗುವುದು. ಆಗಸ್ಟ್ ನಂತರ ಪರಿಸ್ಥಿತಿ ಅವಲೋಕಿಸಿ ಶಾಲೆ, ಕಾಲೇಜು ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.