ಜಮ್ಮು, ಜೂ 08 (Daijiworld News/MSP): ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಪಿಂಜಾರಾ ಪ್ರದೇಶದಲ್ಲಿ ಭಾರತೀಯ ಸೇನಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಕಳೆದ 24ಗಂಟೆಯಲ್ಲಿ ಒಂಬತ್ತು ಉಗ್ರರನ್ನು ಸೇನಾಪಡೆ ಹೊಡೆದು ಉರುಳಿಸಿದೆ
ಸೋಮವಾರ ಬೆಳಿಗ್ಗೆ ಮತ್ತೊಂದು ಎನ್ ಕೌಂಟರ್ ನಡೆದಿದ್ದು ಪಿಂಜಾರಾ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತವಾದ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಡನ್ ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳು ಭಯೋತ್ಪಾದಕರ ವಿವರಗಳನ್ನು ಬಹಿರಂಗಪಡಿಸಿಲ್ಲ. ಯುವಕರನ್ನು ಭಯೋತ್ಪಾದಕರತ್ತ ಹೆಚ್ಚು ಆಕರ್ಷಿಸದಿರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು. ಶೋಪಿಯಾನ್ ಜಿಲ್ಲೆಯ ರೆಬೆನಾ ಪ್ರದೇಶದಲ್ಲಿ ಮನೆಯೊಂದರಲ್ಲಿ ಭಾನುವಾರ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬೊಲ್ಲಾ ಕಮಾಂಡರ್ ಸೇರಿದಂತೆ ಐದು ಮಂದಿ ಉಗ್ರರನ್ನು ಹೊಡೆದುರುಳಿಸಿದ್ದರು.