ಶಿವಮೊಗ್ಗ, ಜೂ 9 (Daijiworld News/MSP): ರಾಜ್ಯಸಭೆ ಚುನಾವಣೆ ಸಂಬಂಧ ಬಿಜೆಪಿ ಹೈಕಮಾಂಡ್ ರಾಜ್ಯದ ಘಟಾನುಘಟಿ ನಾಯಕರಿಗೆ ಅಚ್ಚರಿ ಮತ್ತು ಅಘಾತ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ , ಬಿಜೆಪಿಯೂ ಒಂದು ಕೂಡು ಕುಟುಂಬದಂತಹ ವ್ಯವಸ್ಥೆಯಲ್ಲಿ ಕುಟುಂಬದ ಹಿರಿಯರು ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಮಾಡಿದ್ದಾರೆ ಹೀಗಾಗಿ ಅವರ ನಿರ್ಧಾರ ಸರಿಯಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ನಾಯಕರೆಲ್ಲರೂ ನಮ್ಮ ನಮ್ಮ ವಿವೇಚನೆಯಂತೆ ಅಂತಿಮ ತೀರ್ಮಾನ ಮಾಡಿ ಅಭ್ಯರ್ಥಿಗಳ ಪಟ್ಟಿ ಕಳುಹಿಸಿದ್ದೇವೆ. ಆದರೆ ಅದಕ್ಕಿಂತ ಒಳ್ಳೆಯದ್ದು ಎಂದು ಅವರು ಯೋಚನೆ ಮಾಡಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡಬೇಕು ಎಂದು ಚಿಂತಿಸಿ ಟಿಕೆಟ್ ನೀಡಿದ್ದಾರೆ ಎಂದರು.
ಹೈಕಮಾಂಡ್ ಅಂದರೆ ಹಿರಿಯರು, ಜಿಲ್ಲೆ, ರಾಜ್ಯ ಹಾಗೂ ದೇಶದ ಹಿತದೃಷ್ಟಿಯಿಂದ ಯೋಚನೆ ಮಾಡಿಯೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅವರ ಅಲೋಚನೆ ಸರಿಯಾಗಿಯೇ ಇರುತ್ತದೆ ಅದನ್ನು ಪಕ್ಷದ ಎಲ್ಲಾ ಕಾರ್ಯಕರ್ತರು ಸಂತೋಷದಿಂದ ಸ್ವಾಗತಿಸಿದ್ದಾರೆ. ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ ಎನ್ನುವ ಸಂದೇಶ ನೀಡಿದ್ದಾರೆ ಎಂದರು.