ನವದೆಹಲಿ, ಜೂ 9 (Daijiworld News/MSP): ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ಕೋವಿಡ್-19 ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದ್ದು ಅವರನ್ನು ದಕ್ಷಿಣ ದೆಹಲಿಯ ಸಾಕೇಟ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜ್ಯೋತಿರಾದಿತ್ಯ ಸಿಂಧಿಯಾ ಅವರಲ್ಲಿ ಕೊರೊನಾ ರೋಗ ಲಕ್ಷಣಗಳನ್ನು ತೋರಿಸಿದ್ದರೆ, ಅವರ ತಾಯಿ ಲಕ್ಷಣರಹಿತರಾಗಿ ಉಳಿದಿದ್ದಾರೆ. ಇಬ್ಬರೂ ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದಕ್ಕೂ ಮೊದಲು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪತ್ರಾ ಅವರಲ್ಲಿ ಕೊರೊನಾ ದೃಢಪಟ್ಟಿತ್ತು. ಅವರನ್ನು ಗುರಗಾಂವ್ನ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಲ್ಲೂ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು ಅವರನ್ನು ಐಸೋಲೇಷನ್ ವಾರ್ಡ್ನಲ್ಲಿ ದಾಖಲಿಸಿ ಕೊವಿಡ್ ಪರೀಕ್ಷೆ ನಡೆಸಲಾಗಿದೆ. ಅದರ ವರದಿ ಇಂದು ಸಂಜೆ ಬರುವ ನಿರೀಕ್ಷೆಯಿದೆ.