ತಮಿಳುನಾಡು, ಜೂ 10 (Daijiworld News/MSP): ತಮಿಳುನಾಡಿನ ವಿಪಕ್ಷ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ)ನ ಹಿರಿಯ ಶಾಸಕ ಜೆ ಅನ್ಬಳಗನ್ ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
61 ವರ್ಷದ ಅನ್ಬಳಗನ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇವರ ಆರೋಗ್ಯ ಸ್ಥಿತಿ ಸೋಮವಾರದಿಂದ ಸಂಜೆಯಿಂದ ಬಿಗಡಾಯಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಡಾ. ರೆಲಾ ಆಸ್ಪತ್ರೆ ವೈದ್ಯಾಧಿಕಾರಿ ತಿಳಿಸಿದ್ದಾರೆ.
ವೈರಸ್ ಸೋಂಕಿನಿಂದ ರಕ್ತದೊತ್ತಡ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗಲಿಲ್ಲ ಹಾಗೂ ಆಮ್ಲಜನಕದ ಪ್ರಮಾಣ ಅರ್ಧಕ್ಕೆ ಕುಸಿದಿತ್ತು ಎಂದು ಡಾ.ರೆಲಾ ಸಂಸ್ಥೆ ಮತ್ತು ವೈದ್ಯಕೀಯ ಕೇಂದ್ರ ತಿಳಿಸಿದೆ.