ಶೋಪಿಯಾನ್, ಜೂ.10 (DaijiworldNews/MB) : ಕಳೆದ ಹಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಉಗ್ರರನ್ನು ಹೊಡೆದುರುಳಿಸುತ್ತಲ್ಲಿದ್ದು ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಶೋಪಿಯಾನ್ ಜಿಲ್ಲೆಯ ಸುಗೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಮೇರೆಗೆ ಭದ್ರತಾ ಪಡೆಗಳು ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಮಾಡಿದ್ದು ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು ಸೇನಾ ಪಡೆ ಮೂವರು ಉಗ್ರರನ್ನು ಹೊಡೆದಿರುಳಿಸಿದ್ದಾರೆ.
ಕಾರ್ಯಾಚರಣೆ ಈಗಲೂ ಮುಂದುವರೆದಿದೆ ಎಂದು ವರದಿ ತಿಳಿಸಿದೆ.