ಬೆಂಗಳೂರು, ಜೂ 10 (DaijiworldNews/PY) : ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ, ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ. ಆದರೆ ಈ ಮುತ್ಸದ್ದಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. ದೇವರು ಇಬ್ಬರಿಗೂ ಒಳ್ಳೆಯ ಆರೋಗ್ಯವನ್ನು ಕರುಣಿಸಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಅವರು, ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ, ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ. ಆದರೆ ಈ ಮುತ್ಸದ್ದಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. ದೇವರು ಇಬ್ಬರಿಗೂ ಒಳ್ಳೆಯ ಆರೋಗ್ಯವನ್ನು ಕರುಣಿಸಲಿ. ಬಿಜೆಪಿಯ ಉದಾರತೆಗೆ ಅಭಿನಂದನೆಗಳು ಎಂದು ಬರೆದಿದ್ದಾರೆ.
ಮಾಜಿ ಪ್ರಧಾನಿ ದೇವೆಗೌಡ ಅವರು ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಷ್ಟ್ರದ ನಾಯಕರ ಮನವಿಯ ಮೇರೆಗೆ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನ ಮಾಡಿದ್ದಾರೆ. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿ ವ್ಯಕ್ತಪಡಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದರು.
ಜೂನ್ 19ರಂದು ನಡೆಯಲಿರುವ ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಇರದ ರಾಯಚೂರಿನ ಅಶೋಕ್ ಗಸ್ತ ಹಾಗೂ ಬೆಳಗಾವಿಯ ಈರಣ್ಣ ಕಡಾಡಿ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಿದೆ.