ಕಲಬುರ್ಗಿ, ಜೂ 10 (DaijiworldNews/PY) : ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ಡೌನ್ ಘೋಷಣೆ ಮಾಡಿದ್ದನ್ನು ವಿಶ್ವದ ನಾಯಕರು ಶ್ಲಾಘಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬುಧವಾರ ಸೇಡಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವುದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದು ಸರಿಯಾದ ಕ್ರಮವಾಗಿದೆ. ರಾಹುಲ್ ಗಾಂಧಿ ಅವರು ರಾಜಕೀಯ ಕಾರಣಕ್ಕಾಗಿ ಲಾಕ್ಡೌನ್ ವಿಚಾರದ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಹೊರತು ಬೇರೇನೂ ಇಲ್ಲ ಎಂದಿದ್ದಾರೆ.
ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲಾಕ್ಡೌನ್ನಲ್ಲಿ ಸಿಲುಕಿದ್ದ 3 ಕೋಟಿಗೂ ಅಧಿಕ ಮಂದಿ, ವಲಸೆ ಕಾರ್ಮಿಕರಿಗೆ ನೆರವಾಗಿದ್ದಾರೆ. ಅಲ್ಲದೇ, ಆಹಾರ ಕಿಟ್ ಹಾಗೂ ಅಗತ್ಯ ಸೌಕರ್ಯ ಕಲ್ಪಿಸಿದ್ದಾರೆ ಎಂದು ತಿಳಿಸಿದರು.