ಹಾಸನ, ಜೂ 10 (DaijiworldNews/PY) : ಕೊರೊನಾ ಕರ್ತವ್ಯ ಒತ್ತಡದಿಂದ ವೈದ್ಯರೊಬ್ಬರು ಕರ್ತವ್ಯದಲ್ಲಿದ್ದಾಲೇ ಅನಾರೋಗ್ಯದಿಂದ ಕುಸಿದು ಬಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತಪಟ್ಟ ವೈದ್ಯರನ್ನು ದಾವಣಗೆರೆ ಮೂಲದ ಡಾ. ಶಿವಕಿರಣ್ ಎನ್ನಲಾಗಿದೆ.
ಮೃತ ವೈದ್ಯ ಶಿವಶರಣ್ ಅವರು, ಕೊರೊನಾ ವಿರುದ್ದ ಕಳೆದ ಮೂರು ತಿಂಗಳಿನಿಂದ ನಿರಂತರ ಕಾರ್ಯ ನಿರ್ವಹಿಸುತ್ತಿದ್ದರು. ಕೆಲಸದ ಸಂದರ್ಭ ತಲೆನೋವಿನಿಂದ ಬಳಲಿದ್ದ ವೈದ್ಯ ಶಿವಶರಣ್ ಅವರು ಈ ಬಗ್ಗೆ ಸಹೋದ್ಯೋಗಿಗಳ ಬಳಿ ಹೇಳಿಕೊಂಡಿದ್ದರು. ಆದರೆ, ಕಳೆದ ಐದು ದಿನದ ಹಿಂದೆ ಕರ್ತವ್ಯದಲ್ಲಿದ್ದಾಗಲೇ ಶಿವಶರಣ್ ಅವರು ತಲೆಸುತ್ತಿ ಬಿದ್ದಿದ್ದರು.
ಅವರನ್ನು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐದು ದಿನ ವೆಂಟಿಲೇಟರ್ನಲ್ಲಿದ್ದ ವೈದ್ದ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಕೊರೊನಾ ಸಮಯದಲ್ಲಿ ಕೆಲಸದ ಒತ್ತಡವೇ ಸಾವಿಗೆ ಕಾರಣ ಎನ್ನುವ ಆರೋಪ ಕೇಳಿಬಂದಿದೆ. ಮೃತ ವೈದ್ಯರ ಕೊರೊನಾ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ.