ನವದೆಹಲಿ, ಜೂ 11 (DaijiworldNews/PY) : ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಸಾಧುಗಳು ಸೇರಿದಂತೆ ಮೂವರ ಹತ್ಯೆ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಇಂದು ನಡೆಯಲಿದೆ.
ಈ ಪ್ರಕರಣದ ಬಗ್ಗೆ ನ್ಯಾಯಮೂರ್ತಿಗಳಾದ ಜೆ.ಅಶೋಕ್ ಭೂಷಣ್, ಎಂ.ಆರ್.ಶಾ ಹಾಗೂ ವಿ.ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಲಿದೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಸಾಧುಗಳು ಸೇರಿದಂತೆ ಮೂವರನ್ನು ಎಪ್ರಿಲ್ ಕೊನೆಯ ವಾರದಲ್ಲಿ ಜನರ ಗುಂಪೊಂದು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದು, ಮಹಾರಾಷ್ಟ್ರ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ರಾಜ್ಯ ಸರ್ಕಾರದ ತನಿಖಾ ವಿಧಾನಗಳು ಪೂರ್ವಾಗ್ರಹಗಳಿಂದ ಕೂಡಿವೆ. ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಹಾಗಾಗಿ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಬಿಐಗೆ ವಹಿಸಬೇಕೆಂದು ಹತ್ಯೆಯಾದ ಸಾಧುಗಳ ಸಂಬಂಧಿಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.