ಹುಬ್ಬಳ್ಳಿ, ಜೂ.11 (DaijiworldNews/MB) : ಪಾಕಿಸ್ತಾನ ಜಿಂದಾಬಾದ್ ಎಂದು ಘೋಷನೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರಾಗಿದ್ದು ಅವರನ್ನು ಬಿಡುಗಡೆ ಮಾಡಲಾಗಿದ್ದು ಇದಕ್ಕೆ ವಕೀಲಯ ಸಂಘದ ಅಧ್ಯಕ್ಷ ಅಶೋಕ್ ಅಣವೇಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮಾತನಾಡಿದ ಅವರು, ಹುಬ್ಬಳ್ಳಿ ಗ್ರಾಮೀಣ ಪೊಲೀಸರು ನಿಗದಿತ ಸಮಯದಲ್ಲಿ ಚಾರ್ಚ್ ಶೀಟ್ ಇರುವುದರಿಂದ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಗ್ರಾಮೀಣ ಪೋಲಿಸರು 90 ದಿನದಲ್ಲಿ ಚಾರ್ಜ್ ಶೀಟ್ ದಾಖಲಿಸಬೇಕಿತ್ತು ಆದರೆ 109 ದಿನಗಳ ನಂತರ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರ ನಿರ್ಲಕ್ಷ್ಯತನ, ಸೋಮಾರಿತನವೇ ಈ ದೇಶದ್ರೋಹಿಗಳು ಬಿಡುಗಡೆಯಾಗಲು ಕಾರಣ ಎಂದು ಆರೋಪಿಸಿದ್ದಾರೆ.
ಕಾಶ್ಮೀರಿ ವಿದ್ಯಾರ್ಥಿಗಳನ್ನು ರಕ್ಷಿಸುವ ಷಡ್ಯಂತ್ರ ನಡೆಯುತ್ತಿದ್ದು ಗೃಹ ಸಚಿವರು ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಅವರು ಆಗ್ರಹಿಸಿದರು.