ಬೆಂಗಳೂರು, ಜೂ 11 (Daijiworld News/MSP): ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಮೇಲ್ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಂದ್ರಾ ಲೇಔಟ್ ಮೇಲ್ಸೇತುವೆಯಿಂದ 40 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸದ್ಯ ಆತನ ಗುರುತು ಪತ್ತೆಯಾಗಿಲ್ಲ. ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಅಂಡರ್ ಪಾಸ್ ಮೇಲೆ ಹತ್ತಿ ಕೊರೊನಾ ಸೋಂಕಿತ ವ್ಯಕ್ತಿ ಕೆಳಗೆ ಜಿಗಿದಿದ್ದಾನೆ. ಆಟೋ ಚಾಲಕರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ಮೃತ ವ್ಯಕ್ತಿ ಹೋಮ್ ಕ್ವಾರಂಟೈನ್ ನಲ್ಲಿದ್ದು, ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.