ಬೆಂಗಳೂರು, ಜೂ12 (DaijiworldNews/MSP): ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ತರಗತಿ ಪರೀಕ್ಷೆ ಬರೆಯುವ ಮಕ್ಕಳಿಗೆ ಕೆ.ಎಸ್.ಆರ್.ಟಿ.ಬಸ್ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ್ದು, ಈ ಬಗ್ಗೆ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತಮ್ಮ ಪರೀಕ್ಷಾ ಪ್ರವೇಶ (ಹಾಲ್ ಟಿಕೆಟ್) ತೋರಿಸಿದರೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು.
ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ವಿದ್ಯಾರ್ಥಿಗಳು ಹೋಗುವಾಗ ಹಾಗೂ ಬರುವಾಗ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.
ಜೂ.25ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಹಾಗೂ ಜೂ.18ರಂದು ದ್ವಿತೀಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ಹೊರಡಿಸಿರುವ ಸುತ್ತೊಲೆಯಲ್ಲಿ ತಿಳಿಸಲಾಗಿದೆ.