ಬೆಂಗಳೂರು, ಜೂ 12 (DaijiworldNews/SM): ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಶುಕ್ರವಾರ ಒಂದೇ ದಿನ 7 ಮಂದಿ ಮೃತಪಟ್ಟಿದ್ದಾರೆ. ಆ ಮೂಲಕ ಮೃತರ ಸಂಖ್ಯೆ 79ಕ್ಕೇರಿಕೆಯಾಗಿದೆ.
ಕಳೆದ 24 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ ನಾಲ್ವರು, ಕಲಬುರಗಿಯಲ್ಲಿ ಇಬ್ಬರು ಹಾಗೂ ಹಾಸನದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿಯನ್ನು ಆರೋಗ್ಯ ಇಲಾಖೆ ನೀಡಿದೆ. ಇನ್ನು ಈ ನಡುವೆ ಶುಕ್ರವಾರದಂದು ಹೊಸದಾಗಿ 271 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಮತ್ತೊಂದೆಡೆ ನಿರಾಳಾಗೊಳ್ಳುವ ಸಂಗತಿಯೆಂದರೆ, ಸೋಂಕಿತರು ಬಹುತೇಕ ಮಂದಿ ವೇಗವಾಗಿ ಗುಣಮುಖರಾಗುತ್ತಿದ್ದಾರೆ. ರಾಜ್ಯದಲ್ಲಿ ಗುರುವಾರ 464 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಇಲ್ಲಿಯ ತನಕ 3440 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂದಿದ್ದಾರೆ.