ನವದೆಹಲಿ, ಜೂ 13 (Daijiworld News/MSP): ದೆಹಲಿಯಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದು ಸಾವಿನ ಪ್ರಮಾಣವೂ ಏರುಗತಿಯಲ್ಲಿ ಸಾಗಿದೆ. ಈ ಹಿನ್ನಲೆಯಲ್ಲಿ ಜೂನ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಆರೋಗ್ಯ ಸಚಿವ ಡಾ.ಹರ್ಷ ವರ್ಧನ್ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಎಸ್ಡಿಎಂಎ ಸದಸ್ಯರನ್ನು ಭಾನುವಾರ ಭೇಟಿ ಮಾಡಿ ರಾಷ್ಟ್ರ ರಾಜಧಾನಿಯ ಪರಿಸ್ಥಿತಿಯನ್ನು ಚರ್ಚಿಸಲಿದ್ದಾರೆ.
ಭಾರತದಲ್ಲಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿದ್ದೂ, ಹೆಚ್ಚಾಗುತ್ತಿರುವ ಕೊರೊನಾ ಸಾಂಕ್ರಮಿಕ ರೋಗವೂ ದೆಹಲಿ ಸರ್ಕಾರಕ್ಕೆ ಮತ್ತು ಕೇಂದ್ರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಭಾನುವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ಗೃಹ ಸಚಿವರ ನೇತೃತ್ವ ವಹಿಸಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ಮದ್ಯೆ ದೆಹಲಿಯಲ್ಲಿ ಕೊರೊನಾ ಪರಿಸ್ಥಿತಿ ವಿಚಾರವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ,ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಕಳುಹಿಸಿದೆ.