ನವದೆಹಲಿ, ಜೂ.14 (DaijiworldNews/MB) : ಈಗಾಗಲೇ ಕೊರೊನಾ ಕಾರಣದಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಈಗ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಕೂಡಾ ಭಾರೀ ಹೊಡೆತವನ್ನು ನೀಡುತ್ತಿದ್ದು ಸತತ 8ನೇ ದಿನ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕಂಪನಿಗಳು ಈ ಹೆಚ್ಚಳ ಮಾಡುತ್ತಿದ್ದು ಇನ್ನು ಅಧಿಕವಾಗುವ ಸಾಧ್ಯತೆ ಹೆಚ್ಚಾಗಿದೆ.
ಪೆಟ್ರೋಲ್ ದರದಲ್ಲಿ 62 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 64 ಪೈಸೆ ಏರಿಕೆಯಾಗಿದ್ದು, ದೇಶದ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ರೂ.75.78 ಹಾಗೂ ಪ್ರತೀ ಲೀಟರ್ ಡೀಸೆಲ್ ದರ ರೂ.74.03ಕ್ಕೆ ಏರಿಕೆಯಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ರೂ. 78.23 ರೂ. ಹಾಗೂ ಪ್ರತೀ ಲೀಟರ್ ಡೀಸೆಲ್ ದರ ರೂ.70.39 ರೂ. ಗೆ ಜಿಗಿದಿದೆ.
ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಪೆಟ್ರೋಲ್ಗೆ ರೂ. 82.70, ಡೀಸೆಲ್ಗೆ ರೂ. 72.64, ಪ.ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ಪೆಟ್ರೋಲ್ಗೆ ರೂ. 77.64, ಡೀಸೆಲ್ಗೆ ರೂ. 69.80, ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪೆಟ್ರೋಲ್ಗೆ ರೂ. 79.53, ಡೀಸೆಲ್ಗೆ ರೂ. 72.18 ಇದೆ.