ನವದೆಹಲಿ, ಜೂ 14 (DaijiworldNews/PY) : ದೇಶಾದ್ಯಂತ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,195 ಆಗಿದ್ದು, ಕೇಂದ್ರ ಆರೋಗ್ಯ ಹಾಗೂ ಕಲ್ಯಾಣ ಇಲಾಖೆ ಸಚಿವಾಲಯದ ಮಾಹಿತಿಯ ಪ್ರಕಾರ, 3,08,993 ಮಂದಿಗೆ ಸೋಂಕು ದೃಢಪಟ್ಟಿದ್ದು, 1,62,378 ಮಂದಿ ಚೇತರಿಸಿಕೊಂಡಿದ್ದಾರೆ. 1,49,348 ಕ್ರಿಯಾಶೀಲ ಪ್ರಕರಣಗಳಿವೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 311 ಮಂದಿ ಮೃತಪಟ್ಟಿದ್ದು, ಒಂದೇ ದಿನ 11,929 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ದೆಹಲಿಯಲ್ಲಿ ಒಟ್ಟು 22,742 ಕ್ರಿಯಾಶೀಲ ಪ್ರಕರಣಗಳಿದ್ದು, 38,958 ಮಂದಿಗೆ ಸೋಂಕು ದೃಢಪಟ್ಟಿದೆ. ಈವರೆಗೆ 1,271 ಮಂದಿ ಮೃತಪಟ್ಟಿದ್ದಾರೆ. ಗುಜರಾತ್ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23038 ಆಗಿದ್ದು, ಸೋಂಕಿನಿಂದ 1,448 ಜನರು ಸಾವನ್ನಪ್ಪಿದ್ದಾರೆ. ಕೇರಳದಲ್ಲಿ 2,407 ಮಂದಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿಯವರೆಗೆ 19 ಮಂದಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿ 51,392 ಕ್ರಿಯಾಶೀಲ ಪ್ರಕರಣಗಳಿದ್ದು, ಇಲ್ಲಿಯವರೆಗೆ 3,830 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,965ಕ್ಕೆ ಏರಿದ್ದು, ಇಲ್ಲಿಯವರೆಗೆ 82 ಮಂದಿ ಮೃತಪಟ್ಟಿದ್ದಾರೆ. ಬಿಹಾರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,290 ಆಗಿದ್ದು, ಈ ಪೈಕಿ 39 ಮಂದಿ ಸಾವನ್ನಪ್ಪಿದ್ದಾರೆ.
ಮಧ್ಯಪ್ರದೇಶದಲ್ಲಿ 1,711ಮಂದಿ ಕೊರೊನಾ ಸೋಂಕಿತರಿದ್ದು, ಸಾವನ್ನಪ್ಪಿದವರ ಸಂಖ್ಯೆ 447 ಆಗಿದೆ. ತಮಿಳುನಾಡಿನಲ್ಲಿ 42,687 ಮಂದಿಗೆ ಸೋಂಕು ತಗುಲಿದ್ದು, ಇಲ್ಲಿಯವರೆಗೆ 397 ಮಂದಿ ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದಲ್ಲಿ 13,118 ಮಂದಿ ಕೊರೊನಾ ಸೋಂಕಿತರಿದ್ದು, ಇಲ್ಲಿಯವರೆಗೆ 385 ಮಂದಿ ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 10,698 ಮಂದಿಗೆ ಸೋಂಕು ತಗುಲಿದ್ದು, 463 ಮಂದಿ ಸಾವಿಗೀಡಾಗಿದ್ದಾರೆ.