ಕಲಬುರ್ಗಿ, ಜೂ 14 (DaijiworldNews/PY) : ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಗರದ ಜಿಮ್ಸ್ ವೈದ್ಯಕೀಯ ಕಾಲೇಜಿಗೆ ಭಾನುವಾರ ಬೆಳಿಗ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಬಿಎಸ್ವೈ ಅವರೊಂದಿಗೆ ಮಾತನಾಡಲಿದ್ದಾರೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆಯಿಲ್ಲ. ಸರ್ಕಾರದ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸದ್ಯ ಮಹಾರಾಷ್ಟ್ರ ಹಾಗೂ ವಿದೇಶದಿಂದ ಬಂದರವರನ್ನು ಮಾತ್ರವೇ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ. ರೋಗದ ಲಕ್ಷಣ ಇಲ್ಲದಿದ್ದರೆ ಅವರಿಂದ ಸೋಂಕು ಹರಡುವುದು ಕಡಿಮೆ. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಸ್ಪಷ್ಟಪಡಿಸಿದೆ ಎಂದರು.