ಮಂಗಳೂರು, ಜೂ. 14 (DaijiworldNews/SM): ಕೊರೊನಾ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಜೂನ್ ೧೮ರಂದು ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲ ಪರಿಹರಿಸಿಕೊಳ್ಳಲು ಸಹಾಯವಾಣಿಯನ್ನು ಆರಂಭಿಸಲಾಗಿದೆ.
ಪರೀಕ್ಷೆ ನಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಹತ್ತು ಹಲವು ಗೊಂದಲಗಳಿವೆ. ಈ ಗೊಂದಲ ಬಗೆ ಹರಿಸಲೆಂದೇ ಸಹಾಯವಾಣಿ ಸ್ಥಾಪಿಸಲಾಗಿದೆ. ಈ ಸಹಾಯವಾಣಿ ಮೂಲಕ್ ವಿದ್ಯಾರ್ಥಿಗಳು ಕರೆ ಮಾಡಿ ಸಮಸ್ಯೆ, ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳು ಯಾವುದೇ ನೆರವು ಬೇಕಿದ್ದಲ್ಲಿ ಅಥವಾ ಸಂಶಯಗಳಿದ್ದರೆ, ದೂರವಾಣಿ ಸಂಖ್ಯೆ 0824-2453787 ಇದಕ್ಕೆ ( ಬೆಳಿಗ್ಗೆ 10 ರಿಂದ ಸಂಜೆ 6 ರೊಳಗೆ) ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ.