ಬೆಂಗಳೂರು,ಜೂ 15 (Daijiworld News/MSP): ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಕೊನೆಗೂ ಕಾಲ ಕೂಡಿಬಂದಿದ್ದು, ಜುಲೈ 2 ಕ್ಕೆ ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ.
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿ ತಿಂಗಳು ಕಳೆದರೂ ಪದಗ್ರಹಣ ಕಾರ್ಯಕ್ರಮಕ್ಕೆ ಮಾತ್ರ ಕೊರೊನಾ ಲಾಕ್ ಡೌನ್ ಅಡ್ಡಿಯಾಗಿತ್ತು. ಜೂನ್ 14 ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಈ ಹಿಂದೆ ಒಟ್ಟು ಮೂರು ಬಾರಿ ಪದಗ್ರಹಣ ಕಾರ್ಯಕ್ರಮ ಮುಂದೂಡಲ್ಪಟ್ಟಿದ್ದು, ಇದೀಗ ಜುಲೈ 2 ರಂದು ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ
ಕೆಪಿಸಿಸಿ ನೂತನ ಕಟ್ಟಡದಲ್ಲಿ ಜು.2ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಏಕಕಾಲಕ್ಕೆ 28 ಸಾವಿರ ಲೈವ್ ಸ್ಕ್ರೀನಿಂಗ್ ಅಳವಡಿಕೆ ಮಾಡಿ ಕಾರ್ಯಕರ್ತರಿಗೆ ಪದಗ್ರಹಣ ಕಾರ್ಯಕ್ರಮ ಲೈವ್ ವೀಕ್ಷಿಸವ ಯೋಜನೆ ಡಿಕೆ ಶಿವಕುಮಾರ್ ಅವರದ್ದಾಗಿದೆ.