ನವದೆಹಲಿ, ಜೂ 15 (DaijiworldNews/PY) : ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸೋಮವಾರ ದೆಹಲಿಯಲ್ಲಿ ಸರ್ವ ಪಕ್ಷಗಳ ನಾಯಕರ ಸಭೆ ನಡೆಸಿದರು.
ಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಎಪಿ ಹಾಗೂ ಬಿಎಸ್ಪಿ ಮುಖಂಡರು ಭಾಗವಹಿಸಿದ್ದರು. ದೆಹಲಿಯ ನಾಲ್ಕು ಪ್ರಮುಖ ರಾಜಕೀಯ ಪಕ್ಷಗಳ ನಾಯಕರಿಗೆ ಸೋಂಕು ತಡೆಗೆ ತೆಗೆದುಕೊಂಡಿರುವ ಕ್ರಮಮಗಳ ಬಗ್ಗೆ ಅಮಿತ್ ಶಾ ಅವರು ಮಾಹಿತಿ ನೀಡಿದ್ದು, ಅಲ್ಲದೇ ಈ ಬಗ್ಗೆ ನಾಯಕರಿಂದ ವಿವರ ಪಡೆದುಕೊಂಡರು ಎಂದು ಗೃಹ ಸಚಿವಾಲಯದ ಅಧಿಕಾರಿ ಮಾಹಿತಿ ನೀಡಿದ್ದಾರೆ.
ದೆಹಲಿಯಲ್ಲಿ 41 ಸಾವಿರ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿಗೆ 1,300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಅತೀ ಹೆಚ್ಚು ಕೊರೊನಾ ಪೀಡಿತರ ಸಂಖ್ಯೆಯ ಪಟ್ಟಿಯಲ್ಲಿ ಮಹಾರಾಷ್ಟ್ರ ಹಾಗೂ ತಮಿಳುನಾಡು ಇದ್ದು, ಮೂರನೇ ಸ್ಥಾನದಲ್ಲಿ ದೆಹಲಿ ಇದೆ.