ನವದೆಹಲಿ, ಜೂ 15 (Daijiworld News/MSP): "ದೆಹಲಿಯಲ್ಲಿ ಮತ್ತೊಂದು ಲಾಕ್ ಡೌನ್ ಘೋಷಿಸಲಾಗುತ್ತದೆ ಎಂದು ಅನೇಕ ಜನರು ಊಹಿಸುತ್ತಿದ್ದಾರೆ. ಆದರೆ ದೆಹಲಿ ಸರ್ಕಾರದ ಮುಂದೆ ಅಂತಹ ಯಾವುದೇ ಯೋಜನೆಗಳಿಲ್ಲ" ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಲಾಕ್ಡೌನ್ ವಿಧಿಸಲಾಗುವುದು ಎಂಬಂತೆ ಬಿಂಬಿಸಲಾಗುತ್ತಿದೆ ಆದರೆ ಈ ರೀತಿಯ ಯೋಚನೆ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ದೆಹಲಿಯಲ್ಲಿ ಸರ್ವ ಪಕ್ಷಗಳ ನಾಯಕರ ಸಭೆಯಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರು ಪಾಲ್ಗೊಂಡಿದ್ದರು, ಇದರಲ್ಲಿ ಮತ್ತು ಕೇಂದ್ರ ಸರ್ಕಾರಗಳ ಅಡಿಯಲ್ಲಿ ಬರುವ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆ ಪ್ರಸ್ತಾಪಗಳನ್ನು ಮಾಡಲಾಗಿತ್ತು.