ಕಲಬುರ್ಗಿ, ಜೂ 15 (DaijiworldNews/PY) : ಕಲಬುರ್ಗಿ, ವಿಜಯಪುರ, ಬಳ್ಳಾರಿ ಹಾಗೂ ಮೈಸೂರು ಜಿಲ್ಲೆಗಳನ್ನು ಸ್ಮಾರ್ಟ್ ಸಿಟಿಗಳ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು. ಇದರಿಂದ ಪ್ರತಿಯೊಂದು ಮಹಾನಗರ ಪಾಲಿಕೆಗೆ ತಲಾ 1 ಸಾವಿರ ಲಭಿಸಲಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.
ನಗರದಲ್ಲಿ ಸೋಮವಾರ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷಕ್ಕೊಮ್ಮೆ ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗುತ್ತದೆ. ಕೊರೊನಾ ಕಾರಣದಿಂದ ಮೂರು ತಿಂಗಳ ಕಾಲಾವಧಿ ನೀಡಲಾಗಿದೆ. ಅಗತ್ಯವಾದರೆ ಇನ್ನೂ ಎರಡು ತಿಂಗಳು ವಿಸ್ತರಿಸಲಾಗುವುದು. ಪಾಲಿಕೆಗಳಿಗೆ ಆಸ್ತಿ ತೆರಿಗೆಯೇ ವರಮಾನವಾದ ಮೂಲವಾದ ಕಾರಣ ಆಸ್ತಿ ತೆರಿಗೆ ದರ ಪರಿಷ್ಕರಣೆಯನ್ನು ಬಿಡಲು ಸಾಧ್ಯವಿಲ್ಲ ಎಂದರು.
ಕಲಬುರ್ಗಿಯ 55 ವಾರ್ಡ್ಗಳಲ್ಲಿ ನಿರಂತರ ಕುಡಿಯುವ ನೀರಿಗೆ ಸುಮಾರು 838 ಕೋಟಿ ಸಾಲವನ್ನು ವಿಶ್ವಬ್ಯಾಂಕ್ನಿಂದ ಸಾಲ ಮಂಜೂರಾಗಿದೆ. ಶೀಘ್ರವೇ ಕಾಮಗಾರಿ ಆರಂಭವಾಗಲಿದೆ. ಕಲಬುರ್ಗಿ ನಗರಕ್ಕೆ ದಶಕಗಳ ಹಿಂದೆ ನೀರು ಪೂರೈಕೆ ಮಾಡುತ್ತಿದ್ದ ಬೋಸಗಾ ಕೆರೆಯ ಹೂಳೆತ್ತಲು ಹಾಗೂ ಸೌಂದರೀಕರಣ ಮಾಡಲು ಡಿಪಿಆರ್ ತಯಾರು ಮಾಡಲು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.