ಬೆಂಗಳೂರು, ಜೂ.16 (DaijiworldNews/MB) : ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ಗಳ ಶುಲ್ಕ ಹೆಚ್ಚಿಸಿರುವ ಬಗ್ಗೆ ಮಾಹಿತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಹುಬ್ಬಳ್ಳಿಯ ದಿವಂಗತ ಜಿ.ಬಿ. ಕುಲಕರ್ಣಿ ಸ್ಮಾರಕ ಕಾನೂನು ಸಂಸ್ಥೆಯ ಅಧ್ಯಕ್ಷ ಡಾ. ವಿನೋದ್ ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದ್ದು, "ಶುಲ್ಕ ಹೆಚ್ಚಳ ಮಾಡಿರುವ ಮಾಹಿತಿ ಸಲ್ಲಿಸಿ" ಎಂದು ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
ಅರ್ಜಿದಾರರು, ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ಗಳ ಶುಲ್ಕ ಹೆಚ್ಚಿಸಿರುವ ಸರ್ಕಾರದ ಆದೇಶ ರದ್ದು ಮಾಡಿ, ಶುಲ್ಕ ನಿಯಂತ್ರಣ ಸಮಿತಿಗೆ ತಕ್ಷಣ ಅಧ್ಯಕ್ಷರನ್ನು ನೇಮಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನು ಸರ್ಕಾರ ಈ ಹಿಂದೆ ವಿಚಾರಣೆ ನಡೆಸಿದಾಗ ಹೈಕೋರ್ಟ್ ಶುಲ್ಕ ನಿಯಂತ್ರಣ ಸಮಿತಿಗೆ ಅಧ್ಯಕ್ಷರನ್ನು ನೇಮಿಸಲು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಿತ್ತು.