ಶ್ರೀನಗರ, ಜೂ.16 (DaijiworldNews/MB) : ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಟುರ್ಕ್ ವಂಗಮ್ ಪ್ರದೇಶದಲ್ಲಿ ಮತ್ತೆ ಮೂವರು ಉಗ್ರರನ್ನು ಮಂಗಳವಾರ ಬೆಳ್ಳಂಬೆಳಗ್ಗೆ ಭದ್ರತಾ ಪಡೆ ಹೊಡೆದುರುಳಿಸಿದೆ.
ಕಳೆದ ಹಲವು ದಿನಗಳಿಂದ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆ ಉಗ್ರರ ಬೇಟೆ ನಡೆಸುತ್ತಿದ್ದು 20 ಕ್ಕೂ ಅಧಿಕ ಉಗ್ರರನ್ನು ಹತ್ಯೆ ಮಾಡಿದೆ.
ಉಗ್ರರು ಇರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಭದ್ರತಾ ಪಡೆಯು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು ಹತ್ಯೆಯಾದ ಮೂವರು ಉಗ್ರರ ಗುರುತಿನ ಬಗ್ಗೆ ಇನ್ನಷ್ಟೇ ಮಾಹಿತಿ ಲಭಿಸಬೇಕಿದೆ.
ಈ ಮೂವರು ಉಗ್ರರು ಸೇರಿದಂತೆ ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ 10 ದಿನಗಳ ಅವಧಿಯಲ್ಲಿ ಒಟ್ಟು 17 ಉಗ್ರರನ್ನು ವಿವಿಧ ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ.