ನವದೆಹಲಿ, ಜೂ 16 (Daijiworld News/MSP): ಭಾರತೀಯ ರಾಯಭಾರ ಕಚೇರಿ ಇಬ್ಬರು ಸಿಬ್ಬಂದಿಯನ್ನು ಅಪಹರಿಸಿ, 10 ಗಂಟೆ ಅಕ್ರಮ ಬಂಧನದಲ್ಲಿ ಇರಿಸಿಕೊಂಡಿದ್ದ ಪಾಕಿಸ್ತಾನದ ಅಧಿಕಾರಿಗಳನ್ನು ಮನಬಂದಂತೆ ಥಳಿಸಲಾಗಿದೆ ಎಂದು ವರದಿಯಾಗಿದೆ.
ಅಧಿಕಾರಿಗಳ ನಾಪತ್ತೆ ಹಾಗೂ ಬಂಧನಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಪಾಕಿಸ್ತಾನ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕರೆಸಿ ತೀವ್ರ ಪ್ರತಿಭಟನೆ ದಾಖಲಿಸಿತ್ತು. ಇದರ ಬೆನ್ನಿಗೆ ಇಬ್ಬರೂ ಭಾರತೀಯ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ.
ಈ ನಡುವೆ ಪಾಕಿಸ್ತಾನವೂ ಈ ಇಬ್ಬರು ಅಧಿಕಾರಿಗಳು ಕಾರನ್ನು ಅತಿವೇಗವಾಗಿ ಚಲಾಯಿಸಿ, ಪಾದಾಚಾರಿಗಳಿಗೆ ಢಿಕ್ಕಿ ಹೊಡೆದಿದ್ದರು. ಅಲ್ಲದೆ ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದರು. ಇದರಿಂದ ರೊಚ್ಚಿಗೆದ್ದ ಜನ ಕಾರನ್ನು ತಡೆದು, ಇವರ ಮೇಲೆ ಹಲ್ಲೆ ಮಾಡಿದ್ದಾರೆ. ನಾವೇನೂ ಹಲ್ಲೆ ನಡೇಸಿಲ್ಲ ಎಂದು ಕಥೆ ಕಟ್ಟಿದೆ. ಜನರ ಗುಂಪಿನಿಂದ ಇವರನ್ನು ರಕ್ಷಿಸಿ, ಸೂಕ್ತ ಭದ್ರತೆಯಲ್ಲಿ ಇರಿಸಲಾಗಿತ್ತು. ಈ ಸಂದರ್ಭದಲ್ಲಿ ಅವರ ಮೇಲೆ ಯಾವುದೇ ಹಲ್ಲೆ ಮಾಡಿಲ್ಲ ಎಂದು ತನ್ನನ್ನು ಸಮರ್ಥಿಸಿಕೊಂಡಿದೆ.
ಆದರೆ ಬಿಡುಗಡೆಯಾದ ಬಳಿಕ ರಾಯಭಾರ ಕಚೇರಿಗೆ ಮರಳಿದ ಸಿಬ್ಬಂದಿಯೂ ಅಕ್ರಮ ಬಂಧನದಲ್ಲಿ ಇರಿಸಿಕೊಂಡಿದ್ದ ಸಂದರ್ಭದಲ್ಲಿ ನಮ್ಮ ಮೇಲೆ ಮನಬಂದಂತೆ ಹಲ್ಲೆ ಮಾಡಲಾಯಿತು. ಅಲ್ಲದೆ, ನಾವು ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು 8ಎಲ್-104 ಕಾರನ್ನು ಬೇಕೆಂದೇ ಜಖಂಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದೀಗ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.